Numbers 2:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಎಫ್ರಾಯೀಮ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳವರು ದೇವದರ್ಶನಗುಡಾರದ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ಎಫ್ರಾಯೀಮ್ ಕುಲದವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.
Kannada BSI Bible 2016
ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಶ್ಚಿಮದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮಾ;
Kannada Bible (KNCL) BSI 2016
ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವುದು: ಎಫ್ರಾಯೀಮನ ಮಕ್ಕಳಿಗೆ ಅಮ್ಮೀಹೂದನ ಮಗ ಎಲೀಷಾಮಾನು ಸೈನ್ಯಾಧಿಪತಿ.