Numbers 2:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಎಫ್ರಾಯೀಮ್ ಪಾಳೆಯದಲ್ಲಿರುವ ಸೈನಿಕರು 1,08,100 ಮಂದಿ. ಇವರೆಲ್ಲರು ತಮ್ಮ ವಿಭಾಗಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡವರು. ಜನರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ ಎಫ್ರಾಯೀಮರ ಕುಲದವರು ಮತ್ತು ಅವರ ನಂತರದಲ್ಲಿರುವ ಎರಡು ಕುಲಗಳವರು ಮೂರನೆಯ ಗುಂಪಾಗಿ ಹೊರಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು.
Kannada BSI Bible 2016
ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದವರೆಲ್ಲರೂ 108,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು.
Kannada Bible (KNCL) BSI 2016
ಹೀಗೆ ಎಫ್ರಾಯೀಮರ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,08,100: ಇವರು ಮೂರನೆಯ ದಂಡಾಗಿ ಹೊರಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,08,100 ಮಂದಿ. ಇವರು ಮೂರನೆಯವರಾಗಿ ಹೊರಡತಕ್ಕವರು.