Numbers 2:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ವಿಭಾಗಗಳಿಗನುಸಾರವಾಗಿ ತಮ್ಮತಮ್ಮ ಸ್ವಂತ ಧ್ವಜಗಳೊಡನೆ ಮುನ್ನಡೆಯುವ ಯೆಹೂದ ಮತ್ತು ಅದರ ಗೋತ್ರಗಳವರು ದೇವದರ್ಶನಗುಡಾರದ ಪೂರ್ವದಿಕ್ಕಿನಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದ್ವಾನ ಮಗನಾದ ನಹಶೋನ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.
Kannada BSI Bible 2016
ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು;
Kannada Bible (KNCL) BSI 2016
“ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ.