Numbers 2:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಮ್ಮ ಕುಟುಂಬಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡ ಇಸ್ರೇಲರು ಇವರೇ. ಅವರ ವಿಭಾಗಗಳಿಗನುಸಾರವಾಗಿ ಪಾಳೆಯದಲ್ಲಿ ಲೆಕ್ಕಿಸಲ್ಪಟ್ಟ ಇಸ್ರೇಲರ ಸೈನಿಕರ ಸಂಖ್ಯೆ 6,03,550 ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.
Kannada BSI Bible 2016
ಇಸ್ರಾಯೇಲ್‌ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಲ್ಲಿ ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟವರು ಇವರೇ; ಆ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರು 603,550 ಮಂದಿ.
Kannada Bible (KNCL) BSI 2016
ಇವರೇ ಇಸ್ರಯೇಲರಲ್ಲಿ ಗೋತ್ರಗೋತ್ರಗಳ ಪ್ರಕಾರ ಎಣಿಕೆಯಾದವರು. ಆ ದಂಡುಗಳಲ್ಲಿ ಸೈನಿಕರಾಗಿ ಎಣಿಕೆಯಾದ ಸೈನಿಕರ ಸಂಖ್ಯೆ - 6,03,500:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರಲ್ಲಿ ತಮ್ಮ ಕುಟುಂಬಗಳ ಪ್ರಕಾರವಾಗಿ ಎಣಿಕೆಯಾದವರು ಇವರೇ. ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ 6,03,550 ಮಂದಿ.