Numbers 2:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಯೆಹೋವನು ಮೋಶೆಗೆ ಹೇಳಿದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು. ತಮ್ಮ ಕ್ರಮಕ್ಕನುಸಾರವಾಗಿ ಅವರು ಪಾಳೆಯ ಮಾಡಿಕೊಂಡರು. ನೇಮಕವಾದ ಪ್ರಕಾರವೇ ಪ್ರಯಾಣ ಮಾಡುತ್ತಿದ್ದರು; ಪ್ರತಿಯೊಬ್ಬನು ತನ್ನ ಸ್ವಂತ ಕುಲದೊಡನೆಯೂ ಕುಟುಂಬದೊಡನೆಯೂ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.
Kannada BSI Bible 2016
ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು. ಹಾಗೆಯೇ ದಂಡುದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು; ಹಾಗೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊರಡುತ್ತಿದ್ದರು.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ‍ ಪ್ರಕಾರ ಹೊರಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು.