Numbers 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದ ಪಾಳೆಯದಲ್ಲಿ ಮತ್ತು ಅದರೊಡನೆ ಮುನ್ನಡೆಯುವ ಗೋತ್ರಗಳವರ ಒಟ್ಟು ಸೈನಿಕರು 1,86,400 ಮಂದಿ. ಇವರೆಲ್ಲರು ವಿಭಾಗಗಳಿಗನುಸಾರವಾಗಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡವರು. ಇಸ್ರೇಲರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ, ಯೆಹೂದ ಕುಲವು ಮತ್ತು ಅದರೊಂದಿಗಿರುವ ಎರಡು ಕುಲಗಳವರು ಮೊದಲು ಹೊರಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.
Kannada BSI Bible 2016
ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರೆಲ್ಲರೂ 186,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.
Kannada Bible (KNCL) BSI 2016
ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,86,400: ಇವರು ಮುಂಭಾಗದಲ್ಲಿ ಹೊರಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನ ಪಾಳೆಯದಲ್ಲಿ ಎಣಿಸಲಾದ ಅವರ ಸೈನಿಕರ ಸಂಖ್ಯೆ 1,86,400 ಮಂದಿ. ಅವರು ಮೊದಲು ಹೊರಡತಕ್ಕವರು.