Numbers 20:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.
Kannada BSI Bible 2016
ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಜಿನ್‌ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯ ತಿಂಗಳಲ್ಲಿ ಇಸ್ರಾಯೇಲ್ಯರ ಸರ್ವಸಮೂಹದವರು ಚಿನ್ ಎಂಬ ಅರಣ್ಯಕ್ಕೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ವಿುರ್ಯಾಮಳು ತೀರಿಹೋದಳು; ಆಕೆಯ ಶವವನ್ನು ಸಮಾಧಿಮಾಡಿದರು.
Kannada Bible (KNCL) BSI 2016
ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.