Numbers 20:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಬಂಡೆಯ ಮುಂದೆ ಒಟ್ಟಾಗಿ ಸೇರಿಬರಬೇಕೆಂದು ಮೋಶೆ ಆರೋನರು ಹೇಳಿದರು. ಆಗ ಮೋಶೆ, “ದ್ರೋಹಿಗಳೇ, ಈಗ ನನಗೆ ಕಿವಿಗೊಡಿರಿ. ನಿಮಗೋಸ್ಕರವಾಗಿ ಈ ಬಂಡೆಯಿಂದ ನೀರು ಹರಿಯುವಂತೆ ನಾವು ಮಾಡಬೇಕೋ?” ಎಂದು ಹೇಳಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”
Kannada BSI Bible 2016
ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನ ಜೊತೆಯಲ್ಲಿ ಸಮೂಹದವರನ್ನು ಆ ಕಡಿದಾದ ಬಂಡೆಗೆದುರಾಗಿ ಕೂಡಿಸಿ ಅವರಿಗೆ - ದ್ರೋಹಿಗಳೇ, ಕೇಳಿರಿ; ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ ಎಂದು ಹೇಳಿ
Kannada Bible (KNCL) BSI 2016
ಆರೋನನ ಜೊತೆಯಲ್ಲಿ ಜನಸಮೂಹದವರ ಬಳಿಗೆ ಹೋಗಿ ಕಡಿದಾದ ಆ ಬಂಡೆಗೆದುರಾಗಿ ಅವರನ್ನು ಸಭೆಸೇರಿಸಿದನು. ಅವರನ್ನು ಸಂಬೋಧಿಸುತ್ತಾ, “ದಂಗೆಕಾರರೇ ಕೇಳಿ; ಈ ಬಂಡೆಯಿಂದ ನಿಮಗೆ ನಾವು ನೀರನ್ನು ಬರಮಾಡಬೇಕೋ,” ಎಂದು ಹೇಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯೂ, ಆರೋನನೂ ಜನರನ್ನು ಬಂಡೆಯ ಮುಂದೆ ಕೂಡಿಸಿ, ಅವರಿಗೆ, “ತಿರುಗಿ ಬಿದ್ದವರೇ ಕೇಳಿರಿ, ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ?” ಎಂದರು.