Numbers 20:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಅಲ್ಲಿ ಯೆಹೋವನೊಡನೆ ವಾದ ಮಾಡಿದ್ದರಿಂದ ಆ ಸ್ಥಳವು “ಮೆರೀಬಾ ಬುಗ್ಗೆ” ಎಂದು ಕರೆಯಲ್ಪಟ್ಟಿತು. ಅದಲ್ಲದೆ ಯೆಹೋವನು ತಾನು ಪರಿಶುದ್ಧನು ಎಂಬುದನ್ನು ಅವರಿಗೆ ತೋರಿಸಿದ ಸ್ಥಳವು ಇದೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.
Kannada BSI Bible 2016
ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಅಲ್ಲಿ ಯೆಹೋವನ ಸಂಗಡ ವಿವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ಮೆರೀಬಾ ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಮಹಾಮಹಿಮೆಯನ್ನು ತೋರ್ಪಡಿಸಿದನು.
Kannada Bible (KNCL) BSI 2016
ಇಸ್ರಯೇಲರು ಅಲ್ಲಿ ಸರ್ವೇಶ್ವರನ ಸಂಗಡ ವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ‘ಮೆರೀಬಾ’ ಎಂದು ಹೆಸರಾಯಿತು. ಅಲ್ಲಿ ಸರ್ವೇಶ್ವರ ತಮ್ಮ ಪರಮ ಪಾವನತೆಯನ್ನು ವ್ಯಕ್ತಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಯೆಹೋವ ದೇವರ ಸಂಗಡ ವ್ಯಾಜ್ಯವಾಡಿದ್ದಕ್ಕಾಗಿ ದೇವರು ಅವರಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾ ಸ್ಥಳದ ನೀರು ಇದೇ.