Numbers 20:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಕಾದೇಶಿನಲ್ಲಿದ್ದಾಗ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಂಬಂಧಿಕರವಾದ ಇಸ್ರೇಲರು ಕೇಳಿಕೊಳ್ಳುವುದೇನೆಂದರೆ: ನಮಗೆ ಸಂಭವಿಸಿದ ಎಲ್ಲಾ ಕಷ್ಟಗಳು ನಿಮಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.
Kannada BSI Bible 2016
ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ತಮ್ಮ ಸಂಬಂಧಿಕರಾದ ಇಸ್ರಾಯೇಲ್ಯರು ಕೇಳಿಕೊಳ್ಳುವದೇನಂದರೆ - ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಷ್ಟೆ.
Kannada Bible (KNCL) BSI 2016
ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳಿಸಿದನು. “ತಮ್ಮ ಸಂಬಂಧಿಕರಾದ ಇಸ್ರಯೇಲರು ತಮ್ಮಲ್ಲಿ ಮಾಡುವ ಮನವಿ ಇದು - ನಮಗೆ ಸಂಭವಿಸಿದ ಕಷ್ಟದುಃಖಗಳೆಲ್ಲಾ ತಮಗೆ ತಿಳಿದೇ ಇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಹೋದರರಾದ ಇಸ್ರಾಯೇಲರು ಹೇಳುವುದೇನೆಂದರೆ, ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
Recommended Reading