Numbers 20:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.
Kannada BSI Bible 2016
ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪಿತೃಗಳು ಐಗುಪ್ತದೇಶಕ್ಕೆ ಇಳಿದು ಹೋದದ್ದೂ ನಾವು ಅಲ್ಲಿ ಬಹುದಿವಸ ವಾಸವಾಗಿದ್ದದ್ದೂ ಐಗುಪ್ತ್ಯರು ನಮ್ಮನ್ನೂ ನಮ್ಮ ಪಿತೃಗಳನ್ನೂ ಉಪದ್ರವಪಡಿಸಿದ್ದೂ
Kannada Bible (KNCL) BSI 2016
ನಮ್ಮ ಪೂರ್ವಜರು ಈಜಿಪ್ಟ್ ದೇಶಕ್ಕೆ ಹೋದದ್ದು, ಅಲ್ಲಿ ನಾವು ಬಹು ದಿವಸ ವಾಸವಾಗಿದ್ದದ್ದು, ಈಜಿಪ್ಟಿನವರು ನಮ್ಮನ್ನೂ ನಮ್ಮ ಪೂರ್ವಜರನ್ನೂ ಹಿಂಸಿಸಿದ್ದು, ಇವೆಲ್ಲಾ ತಿಳಿದ ವಿಷಯಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು.