Numbers 20:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.
Kannada BSI Bible 2016
ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೇಶದಿಂದ ಬಿಡುಗಡೆಮಾಡಿಸಿದ್ದೂ ಇದನ್ನೆಲ್ಲಾ ತಾವು ತಿಳಿದೇ ಇದ್ದೀರಷ್ಟೆ. ಈಗ ನಾವು ತಮ್ಮ ರಾಜ್ಯದ ಕಟ್ಟ ಕಡೆಯ ಹತ್ತಿರವಿರುವ ಕಾದೇಶೆಂಬ ಊರಲ್ಲಿದ್ದೇವೆ.
Kannada Bible (KNCL) BSI 2016
ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.