Numbers 20:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷಿತೋಟಗಳಲ್ಲಿಯಾಗಲಿ ಹಾದುಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.
Kannada BSI Bible 2016
ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ದೇಶವನ್ನು ದಾಟಿಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿ ಯಾದರೂ ದ್ರಾಕ್ಷೇತೋಟಗಳಲ್ಲಿಯಾದರೂ ಹೋಗುವದಿಲ್ಲ; ಬಾವಿಗಳ ನೀರನ್ನು ಕುಡಿಯುವದಿಲ್ಲ; ರಾಜ ಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟಿದ ತನಕ ಬಲಕ್ಕೂ ಎಡಕ್ಕೂ ತಿರುಗುವದಿಲ್ಲ ಎಂದು ಹೇಳಿಸಿದನು.
Kannada Bible (KNCL) BSI 2016
ತಮ್ಮ ನಾಡನ್ನು ದಾಟಿಹೋಗಲು ಅಪ್ಪಣೆ ಆಗಬೇಕೆಂದು ಬೇಡಿಕೊಳ್ಳುತ್ತೇನೆ. ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನೂ ಕುಡಿಯುವುದಿಲ್ಲ. ರಾಜಮಾರ್ಗದಲ್ಲೇ ನಡೆದು, ತಮ್ಮ ನಾಡಿನ ಗಡಿ ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ,” ಎಂದು ಹೇಳಿಕಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮನ್ನು ನಿನ್ನ ದೇಶದೊಳಗಿಂದ ದಾಟಿ ಹೋಗಗೊಡಿಸು; ನಾವು ಹೊಲವನ್ನಾದರೂ, ದ್ರಾಕ್ಷಿ ತೋಟವನ್ನಾದರೂ ದಾಟಿ ಹೋಗುವುದಿಲ್ಲ; ರಾಜಮಾರ್ಗದಲ್ಲಿ ಮಾತ್ರ ಹೋಗುತ್ತೇವೆ; ನಿನ್ನ ಮೇರೆಯನ್ನು ನಾವು ದಾಟುವವರೆಗೆ ಬಲಗಡೆಗಾದರೂ, ಎಡಗಡೆಗಾದರೂ ನಾವು ತಿರುಗುವುದಿಲ್ಲ,” ಎಂದು ವಿನಂತಿಸಿದನು.