Numbers 20:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರೋನನು ಸತ್ತನೆಂದು ಇಸ್ರೇಲರೆಲ್ಲರಿಗೆ ತಿಳಿಯಿತು. ಆದ್ದರಿಂದ ಇಸ್ರೇಲಿನಲ್ಲಿ ಪ್ರತಿಯೊಬ್ಬನೂ ಆರೋನನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.
Kannada BSI Bible 2016
ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನು ಸತ್ತುಹೋದದ್ದನ್ನು ಇಸ್ರಾಯೇಲ್ ಜನಾಂಗದವರೆಲ್ಲರೂ ತಿಳಿದು ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.
Kannada Bible (KNCL) BSI 2016
ಆರೋನನು ಸತ್ತುಹೋದುದನ್ನು ಇಸ್ರಯೇಲ್ ಸಮಾಜದವರೆಲ್ಲರೂ ತಿಳಿದು ಅವನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನು ತೀರಿಹೋದನೆಂದು ಸಭೆಯೆಲ್ಲಾ ನೋಡಿದಾಗ, ಇಸ್ರಾಯೇಲರೆಲ್ಲರೂ ಆರೋನನಿಗೋಸ್ಕರ ಮೂವತ್ತು ದಿವಸಗಳವರೆಗೂ ದುಃಖಿಸಿದರು.