Numbers 20:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನಿಂದ ನಮ್ಮನ್ನು ಇಲ್ಲಿಗೆ ಯಾಕೆ ಕರೆತಂದೆ? ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ಯಾಕೆ ಕರೆದುಕೊಂಡು ಬಂದೆ? ಇಲ್ಲಿ ಧಾನ್ಯವಾಗಲಿ ಅಂಜೂರವಾಗಲಿ ದ್ರಾಕ್ಷಿಯಾಗಲಿ ದಾಳಿಂಬೆಯಾಗಲಿ ಇಲ್ಲ, ಕುಡಿಯುವುದಕ್ಕೆ ನೀರೂ ಇಲ್ಲ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು.
Kannada BSI Bible 2016
ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನು ಐಗುಪ್ತದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರಕೊಂಡು ಬಂದಿರಿ? ಈ ನೆಲದಲ್ಲಿ ಯಾವ ಧಾನ್ಯವೂ ಬೆಳೆಯುವದಿಲ್ಲ, ಮತ್ತು ಅಂಜೂರವಿಲ್ಲ, ದ್ರಾಕ್ಷೆಯಿಲ್ಲ, ದಾಳಿಂಬವಿಲ್ಲ, ಕುಡಿಯುವದಕ್ಕೆ ನೀರಾದರೂ ಇಲ್ಲ ಎಂದೂ ಹೇಳುತ್ತಿದ್ದರು.
Kannada Bible (KNCL) BSI 2016
ಈಜಿಪ್ಟ್ ದೇಶದಿಂದ ನಮ್ಮನ್ನು ಬರಮಾಡಿದ್ದು ಈ ಕೀಳು ಸ್ಥಳಕ್ಕೆ ಸೇರಿಸಲಿಕ್ಕೋ? ಈ ನೆಲದಲ್ಲಿ ದವಸಧಾನ್ಯ ಬೆಳೆಯುವಂತಿಲ್ಲ; ಅಂಜೂರವಿಲ್ಲ, ದ್ರಾಕ್ಷಿಯಿಲ್ಲ, ದಾಳಿಂಬೆಯಿಲ್ಲ, ಕುಡಿಯುವುದಕ್ಕೆ ನೀರು ಕೂಡ ಇಲ್ಲ“ ಎಂದು ದೂರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವುದಕ್ಕೆ ಏಕೆ ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಕರಕೊಂಡು ಬಂದಿರಿ. ಈ ಸ್ಥಳದಲ್ಲಿ ಧಾನ್ಯವಾದರೂ ಅಂಜೂರವಾದರೂ ದ್ರಾಕ್ಷಿ ತೋಟವಾದರೂ ದಾಳಿಂಬೆ ಹಣ್ಣಾದರೂ ಇಲ್ಲ. ಕುಡಿಯುವುದಕ್ಕೆ ನೀರು ಸಹ ಇಲ್ಲ,” ಎಂದರು.