Numbers 20:8 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಳಿಕ ನೀನು ಮತ್ತು ನಿನ್ನ ಸಹೋದರನಾದ ಆರೋನನು ಜನರನ್ನು ಬಂಡೆಯ ಮುಂದೆ ಸಭೆಸೇರಿಸಿ, ಜನರ ಮುಂದೆ ಆ ಬಂಡೆಗೆ ಮಾತಾಡು. ಆಗ ನೀರು ಬಂಡೆಯಿಂದ ಹರಿಯುವುದು ಮತ್ತು ನೀರನ್ನು ಜನರಿಗೂ ಅವರ ಪಶುಗಳಿಗೂ ಕೊಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.
Kannada BSI Bible 2016
ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
Kannada Bible (KNCL) BSI 2016
ಅದರಿಂದ ನೀರು ಹೊರಟು ಬರುವುದು. ಅದನ್ನು ಜನಸಮೂಹದವರಿಗೂ ಅವರ ಜಾನುವಾರುಗಳಿಗೂ ಕುಡಿಯಲು ಕೊಡಬಹುದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.