Numbers 21:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಕೂಡಿಸಿಕೊ, ನಾನು ಅವರಿಗೆ ನೀರನ್ನು ಕೊಡುವೆನು” ಎಂದು ಯೆಹೋವನು ಮೋಶೆಗೆ ಹೇಳಿದ್ದು ಈ ಬಾವಿಯ ಸ್ಥಳದಲ್ಲೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
Kannada BSI Bible 2016
ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಜನರನ್ನು ಕೂಡಿಸಿಕೋ, ನಾನು ಅವರಿಗೆ ಜಲಾಧಾರವನ್ನುಂಟುಮಾಡಿ ಕೊಡುವೆನು ಎಂದು ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವಾದದ್ದೇ.
Kannada Bible (KNCL) BSI 2016
ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಸೇರಿಸು, ಅವರಿಗೆ ಜಲಧಾರೆಯನ್ನು ಕೊಡುವೆನು” ಎಂದು ಸರ್ವೇಶ್ವರ ಮೋಶೆಗೆ ಹೇಳಿದ್ದು ಇಲ್ಲಿನ ಬಾವಿಯನ್ನು ಕುರಿತೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ.