Numbers 21:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಬಾಮೋತಿನಿಂದ ಮೋವಾಬ್ಯರ ಪ್ರದೇಶದ ಕಣಿವೆಗೆ ಪ್ರಯಾಣ ಮಾಡಿದರು. ಪಿಸ್ಗಾ ಬೆಟ್ಟದ ತುದಿಯ ಸಮೀಪದಲ್ಲಿ ನಿಂತುಕೊಂಡರೆ ಮರುಭೂಮಿಯು ಕಾಣುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
Kannada BSI Bible 2016
ಬಾಮೋತಿನಿಂದ ಮೋವಾಬ್ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಮೋತಿನಿಂದ ಮೋವಾಬ್ಯರ ಬೈಲಿನ ಪ್ರದೇಶದಲ್ಲಿರುವ ತಗ್ಗಿಗೆ ಅಂದರೆ ಪಿಸ್ಗಾ ಎಂಬ ಬೆಟ್ಟದ ಸೀಮೆಯ ಅಂಚಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯ ಪ್ರದೇಶವು ಕಾಣಿಸುತ್ತದೆ.
Kannada Bible (KNCL) BSI 2016
ಬಾಮೋತಿನಿಂದ ಮೋವಾಬ್ಯರ ಬೈಲುಪ್ರದೇಶದಲ್ಲಿರುವ ಕಣಿವೆಗೆ, ಅಂದರೆ ‘ಪಿಸ್ಗಾ’ ಎಂಬ ಮಲೆನಾಡಿನ ಅಂಚಿಗೆ ಬಂದರು. ಕೆಳಗಿರುವ ‘ಯೆಷೀಮೋನ್’ ಎಂಬ ಮರಳುಗಾಡು ಆ ಗುಡ್ಡದ ಮೇಲಿಂದ ಕಾಣಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ.