Numbers 21:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಷ್ಬೋನಿನಲ್ಲಿ ಅಮೋರಿಯರ ಅರಸನಾದ ಸೀಹೋನನು ವಾಸಿಸುತ್ತಿದ್ದನು. ಸೀಹೋನನು ಮೊದಲಿನ ಮೋವಾಬ್ಯರ ಅರಸನೊಡನೆ ಯುದ್ಧ ಮಾಡಿದ್ದನು. ಸೀಹೋನನು ಅರ್ನೋನ್ ನದಿಯವರೆಗಿರುವ ಆ ರಾಜನ ಪ್ರದೇಶವನ್ನೆಲ್ಲ ವಶಪಡಿಸಿಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
Kannada BSI Bible 2016
ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ಹೊಳೆಯವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
Kannada Bible (KNCL) BSI 2016
ಹೆಷ್ಬೋನ್ ಪಟ್ಟಣ ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಹಿಂದಿನ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ಹೊಳೆಯವರೆಗೂ ಅವನ ನಾಡನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು.