Numbers 21:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಷ್ಬೋನಿನಲ್ಲಿ ಬೆಂಕಿಯುಂಟಾಯಿತು. ಆ ಬೆಂಕಿ ಸೀಹೋನನ ಪಟ್ಟಣದಲ್ಲಿ ಉಂಟಾಯಿತು. ಆ ಬೆಂಕಿಯು ಮೋವಾಬಿನಲ್ಲಿರುವ ‘ಆರ್’ ಪಟ್ಟಣವನ್ನು ನಾಶಮಾಡಿತು. ಅದು ಅರ್ನೋನ್ ನದಿಯ ಬಳಿಯಲ್ಲಿರುವ ಬೆಟ್ಟಗಳನ್ನು ಸುಟ್ಟುಹಾಕಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
Kannada BSI Bible 2016
ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿಜ್ವಾಲೆಹೊರಟು ಮೋವಾಬ್ಯರ ರಾಜಧಾನಿಯಾದ ಆರ್ ಎಂಬಪಟ್ಟಣವನ್ನೂ ಅರ್ನೋನ್ ಹೊಳೆಯ ಬಳಿಯಲ್ಲಿರುವ ಪೂಜಾಸ್ಥಳಗಳ ದೇವತೆಗಳನ್ನೂ ದಹಿಸಿಬಿಟ್ಟಿತು.
Kannada Bible (KNCL) BSI 2016
ಸೀಹೋನನಾ ಪಟ್ಟಣ, ಆ ಹೆಷ್ಬೋನ್, ಅಲ್ಲಿಂದಲೆ ಹೊರಟು ಬಂದಿತು ಅಗ್ನಿಜ್ವಾಲೆ. ದಹಿಸಿ ಬಿಟ್ಟಿತದು ಮೋವಾಬ್ಯರ ರಾಜಧಾನಿಯಾದ ಆರ್ ನಗರವನ್ನು, ಅರ್ನೋನ್ ಹೊಳೆಯ ಬಳಿಯ ಪೂಜಾಸ್ಥಳಗಳ ದೇವತೆಗಳನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.