Numbers 21:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋವಾಬೇ, ಇದು ನಿನಗೆ ಕೆಟ್ಟದ್ದಾಗಿದೆ. ಕೆಮೋಷಿನ ಜನರೇ, ನೀವು ನಾಶವಾದಿರಿ. ಅವನ ಪುತ್ರರು ಓಡಿಹೋದರು. ಅಮೋರಿಯ ರಾಜನಾದ ಸೀಹೋನನು ಅವನ ಪುತ್ರಿಯರನ್ನು ಸೆರೆ ಒಯ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
Kannada BSI Bible 2016
ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ; ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತಲ್ಲಾ. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
Kannada Bible (KNCL) BSI 2016
ಮೋವಾಬ್ಯರೇ, ನಿಮಗೆ ಧಿಕ್ಕಾರ! ಕೆಮೋಷಿನ ಭಕ್ತರೇ, ನಿಮಗೆ ಪರಿವಿನಾಶ! ಮಾಡಿಹನಾತ ತನ್ನ ಕುವರರನ್ನು ದೇಶಭ್ರಷ್ಟರನ್ನಾಗಿ ತನ್ನ ಕುವರಿಯರನ್ನು ಸೆರೆಯಾಳುಗಳನ್ನಾಗಿ ಅಮೋರಿಯರ ಅರಸ ಸೀಹೋನನಿಗೆ ಸೆರೆಯವರನ್ನಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು.