Numbers 21:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.
Kannada BSI Bible 2016
ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆ ಪ್ರಾರ್ಥನೆಯನ್ನು ಕೇಳಿ ಇಸ್ರಾಯೇಲ್ಯರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಲಾಗಿ ಅವರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಶೇಷವಾಗಿ ನಾಶಮಾಡಿಬಿಟ್ಟರು. ಆದದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.
Kannada Bible (KNCL) BSI 2016
ಸರ್ವೇಶ್ವರ ಅವರ ಪ್ರಾರ್ಥನೆಯನ್ನು ಆಲಿಸಿದರು; ಅವರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಿದರು. ಇಸ್ರಯೇಲರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಯೇಷವಾಗಿ ನಾಶಮಾಡಿಬಿಟ್ಟರು. ಈ ಕಾರಣ ಆ ಪ್ರದೇಶಕ್ಕೆ ‘ಹೊರ್ಮ‘ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.