Numbers 21:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾವು ಆ ಅಮೋರಿಯರನ್ನು ಸೋಲಿಸಿದೆವು. ಹೆಷ್ಬೋನಿನಿಂದ ದೀಬೋನಿನವರೆಗಿರುವ ಅವರ ಪಟ್ಟಣಗಳನ್ನೂ ನಾಶೀಮಿನಿಂದ ನೋಫಹದ (ಮೇದೆಬಾದ ಹತ್ತಿರ) ವರೆಗಿರುವ ಪಟ್ಟಣಗಳನ್ನೂ ನಾವು ನಾಶಮಾಡಿದೆವು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”
Kannada BSI Bible 2016
ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿನವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು ಎಂಬದೇ.
Kannada Bible (KNCL) BSI 2016
ಅವರನ್ನು ಹೊಡೆದೆವು ನಾವು ಬಿಲ್ಲುಬಾಣಗಳಿಂದ, ಹೆಷ್ಬೋನಿನಿಂದ ದೀಬೋನಿನವರೆಗೆ ಸರ್ವನಾಶ! ಹಾಳು ಮಾಡಿದೆವು ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾವು ಅವರನ್ನು ಪದಚ್ಚುತಿಗೊಳಿಸಿದೆವು. ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ ನೋಫಹದ ತನಕ ಹಾಳುಮಾಡಿದೆವು.”