Numbers 21:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
Kannada BSI Bible 2016
ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲ್ಯರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
Kannada Bible (KNCL) BSI 2016
ಬಳಿಕ ಮೋಶೆ ಯಗ್ಜೇರನ್ನು ನೋಡಿ ಬರಲು ಗೂಢಚಾರರನ್ನು ಕಳಿಸಿದನು. ಇದಾದ ಬಳಿಕ ಇಸ್ರಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.