Numbers 21:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
Kannada BSI Bible 2016
ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡುಹೋಗುವದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುತ್ತಿರಲು ಮಾರ್ಗಾಯಾಸದಿಂದ ಅವರಿಗೆ ಬೇಸರವಾಯಿತು.
Kannada Bible (KNCL) BSI 2016
ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದ ಅವರಿಗೆ ಬೇಸರವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.