Numbers 21:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
Kannada BSI Bible 2016
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.
Kannada Bible (KNCL) BSI 2016
ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.