Numbers 21:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
Kannada BSI Bible 2016
ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಜನರು ಮೋಶೆಯ ಬಳಿಗೆ ಬಂದು - ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕೆಂದು ಬೇಡಿಕೊಂಡರು.
Kannada Bible (KNCL) BSI 2016
ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.