Numbers 21:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು, ಸರ್ಪಗಳಿಂದ ಕಚ್ಚಿಸಿಕೊಂಡವನು ಅದನ್ನು ನೋಡಿದರೆ ಬದುಕಿಕೊಳ್ಳುವನು” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
Kannada BSI Bible 2016
ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ - ನೀನು [ತಾಮ್ರದಿಂದ] ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು; ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿ ಒಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು.