Numbers 21:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಕಚ್ಚಿಸಿಕೊಂಡಿದ್ದವನು ಆ ತಾಮ್ರದ ಸರ್ಪವನ್ನು ನೋಡಿ ಬದುಕಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
Kannada BSI Bible 2016
ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
Kannada Bible (KNCL) BSI 2016
ಅಂತೆಯೇ ಮೋಶೆ ಕಂಚಿನಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.