Numbers 22:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಹಿರಿಯರಿಗೆ, “ನಿಮ್ಮ ಸ್ವಂತ ದೇಶಕ್ಕೆ ಹಿಂದಕ್ಕೆ ಹೋಗಿರಿ. ನಿಮ್ಮ ಸಂಗಡ ಬರಲು ಯೆಹೋವನು ನನಗೆ ಅಪ್ಪಣೆ ಕೊಡುತ್ತಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.
Kannada BSI Bible 2016
ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಿಗ್ಗೆ ಬಿಳಾಮನು ಬಾಲಾಕನ ಪ್ರಧಾನರಿಗೆ - ನಾನು ನಿಮ್ಮ ಜೊತೆಯಲ್ಲಿ ಬರುವದಕ್ಕೆ ಯೆಹೋವನ ಅಪ್ಪಣೆಯಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ
Kannada Bible (KNCL) BSI 2016
ಬೆಳಿಗ್ಗೆ ಬಿಳಾಮನು ಬಾಲಾಕನ ಮುಖಂಡರಿಗೆ, “ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಸರ್ವೇಶ್ವರನ ಅಪ್ಪಣೆಯಿಲ್ಲ. ನೀವು ನಿಮ್ಮ ನಾಡಿಗೆ ತೆರಳಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ, “ನಿಮ್ಮ ದೇಶಕ್ಕೆ ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಲಿಲ್ಲ,” ಎಂದನು.