Numbers 22:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನಗೆ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಈ ಜನರನ್ನು ಶಪಿಸು” ಎಂದು ಹೇಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.
Kannada BSI Bible 2016
ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ; ನೀನು ಅಗತ್ಯವಾಗಿ ಬಂದು ಈ ಜನವನ್ನು ನನಗೋಸ್ಕರ ಶಪಿಸಬೇಕೆಂದು ಚಿಪ್ಪೋರನ ಮಗನಾದ ಬಾಲಾಕನು ಹೇಳುತ್ತಾನೆಂದು ತಿಳಿಸಿದರು.
Kannada Bible (KNCL) BSI 2016
ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.