Numbers 22:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಿಳಾಮನು ಬಾಲಾಕನ ಅಧಿಕಾರಿಗಳಿಗೆ, “ಬಾಲಾಕನು ನನಗೆ ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನನ್ನ ದೇವರಾದ ಯೆಹೋವನ ಆಜ್ಞೆಗೆ ವಿರೋಧವಾಗಿ ನಾನೇನೂ ಮಾಡಲು ಸಾಧ್ಯವಿಲ್ಲ. ಯೆಹೋವನು ಅಪ್ಪಣೆ ಕೊಡದ ಹೊರತು ನಾನು ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ಮಾಡಲಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.
Kannada BSI Bible 2016
ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಬಿಳಾಮನು - ಬಾಲಾಕನು ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.
Kannada Bible (KNCL) BSI 2016
ಅದಕ್ಕೆ ಬಿಳಾಮನು, “ಬಾಲಾಕನು ತನ್ನ ಮನೆ ತುಂಬ ಬೆಳ್ಳಿ ಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಚಿಕ್ಕದಾಗಿರಲಿ ದೊಡ್ಡದಾಗಿರಲಿ ಉಲ್ಲಂಘಿಸಲಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಳಾಮನು ಪ್ರತ್ಯುತ್ತರವಾಗಿ ಬಾಲಾಕನ ಸೇವಕರಿಗೆ, “ಬಾಲಾಕನು ನನಗೆ ತನ್ನ ಮನೆ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾಗಿರುವ ಯೆಹೋವ ದೇವರ ಮಾತನ್ನು ಮೀರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.