Numbers 22:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನೀವೂ ಸಹ ಇತರ ಹಿರಿಯರಂತೆ ಈ ರಾತ್ರಿ ಇಲ್ಲೇ ಇರಬೇಕು. ಯೆಹೋವನು ನನಗೆ ಇನ್ನೂ ಹೇಳಬೇಕಾದದ್ದನ್ನು ಈ ರಾತ್ರಿ ತಿಳಿದುಕೊಳ್ಳುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ” ಎಂದು ಉತ್ತರಕೊಟ್ಟನು.
Kannada BSI Bible 2016
ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀವೂ ಕೂಡ ಈ ರಾತ್ರಿ ಇಲ್ಲೇ ಇರ್ರಿ; ಯೆಹೋವನು ಈಗ ಏನು ಹೇಳುವನೋ ಅದನ್ನು ನಾನು ತಿಳಿದುಕೊಳ್ಳುತ್ತೇನೆ ಎಂದು ಬಾಲಾಕನ ಸೇವಕರಿಗೆ ಉತ್ತರಕೊಟ್ಟನು.
Kannada Bible (KNCL) BSI 2016
ನೀವು ಕೂಡ ಈ ರಾತ್ರಿ ಇಲ್ಲೇ ತಂಗಿರಿ, ಸರ್ವೇಶ್ವರ ಏನು ಹೇಳುತ್ತಾರೋ ಅದನ್ನು ತಿಳಿದುಕೊಳ್ಳುತ್ತೇನೆ,” ಎಂದು ಬಾಲಾಕನು ದೂತರಿಗೆ ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಗ ಯೆಹೋವ ದೇವರು ನನಗೆ ಮತ್ತೇನು ಹೇಳುವರೆಂದು ನಾನು ತಿಳಿದುಕೊಳ್ಳುವ ಹಾಗೆ, ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ,” ಎಂದನು.