Numbers 22:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಈ ಜನರು ನಿನ್ನನ್ನು ತಮ್ಮೊಡನೆ ಬರಬೇಕೆಂದು ಆಹ್ವಾನಿಸಲು ಬಂದಿದ್ದಾರೆ. ಆದ್ದರಿಂದ ನೀನು ಅವರೊಂದಿಗೆ ಹೋಗಬಹುದು. ಆದರೆ ನಾನು ಹೇಳುವುದನ್ನು ಮಾತ್ರ ಮಾಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.
Kannada BSI Bible 2016
ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು - ಆ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿರುವದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು ಅಂದನು.
Kannada Bible (KNCL) BSI 2016
ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಜನರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ಆಜ್ಞಾಪಿಸುವ ಪ್ರಕಾರವೇ ಮಾಡಬೇಕು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.