Numbers 22:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.
Kannada BSI Bible 2016
ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಕಡೆ ಹೋಯಿತು; ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು.
Kannada Bible (KNCL) BSI 2016
ಸರ್ವೇಶ್ವರನ ದೂತನು ಬಿಚ್ಚುಗತ್ತಿಯನ್ನು ಕೈಯಲ್ಲಿ ಹಿಡಿದು ದಾರಿಯಲ್ಲೇ ನಿಂತನು. ಇದನ್ನು ಕಂಡ ಆ ಕತ್ತೆ ದಾರಿಯನ್ನು ಬಿಟ್ಟು ಅಡವಿಯ ಕಡೆಹೋಯಿತು. ದಾರಿಗೆ ತಿರುಗಿಸಲು ಬಿಳಾಮನು ಅದನ್ನು ಹೊಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.