Numbers 22:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಿರುಗಿ ಕತ್ತೆಯು ಯೆಹೋವನ ದೂತನನ್ನು ನೋಡಿ ಗೋಡೆಗೆ ತನ್ನನ್ನು ಒತ್ತರಿಸಿಕೊಂಡಿತು. ಆಗ ಬಿಳಾಮನ ಪಾದವು ಗೋಡೆಗೆ ಒತ್ತರಿಸಿತು. ಆದ್ದರಿಂದ ಬಿಳಾಮನು ತಿರುಗಿ ಕತ್ತೆಯನ್ನು ಹೊಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು.
Kannada BSI Bible 2016
ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತೆ ಯೆಹೋವನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರಿಗಿ ಹೊಡೆದನು.
Kannada Bible (KNCL) BSI 2016
ಕತ್ತೆ ಆ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡಿತು. ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಿತು. ಅವನು ಅದನ್ನು ಮತ್ತೆ ಹೊಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು, ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು. ಅವನು ಅದನ್ನು ಮತ್ತೆ ಹೆಚ್ಚಾಗಿ ಹೊಡೆದನು.