Numbers 22:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಅಡಗಿ ಮಲಗಿಕೊಂಡಿತು. ಆಗ ಬಿಳಾಮನು ಸಿಟ್ಟುಗೊಂಡು ತನ್ನ ಕೋಲಿನಿಂದ ಕತ್ತೆಯನ್ನು ಹೊಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.
Kannada BSI Bible 2016
ಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತೆಯು ಅವನನ್ನು ನೋಡಿ ಬಿಳಾಮನ ಕೆಳಗೇ ಅಣಗಿಕೊಂಡಾಗ ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಹೊಡೆದನು.
Kannada Bible (KNCL) BSI 2016
ಕತ್ತೆ ಅವನನ್ನು ನೋಡಿ ಬಿಳಾಮನ ಕೆಳಗೆ ಬಿದ್ದುಕೊಂಡಿತು. ಬಿಳಾಮನು ಸಿಟ್ಟುಗೊಂಡು ಕೈಗೋಲಿನಿಂದ ಹೊಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.