Numbers 22:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬ್ಯರು ನಿಜವಾಗಿಯೂ ಬಹಳ ಭಯಗೊಂಡಿದ್ದರು. ಯಾಕೆಂದರೆ ಇಸ್ರೇಲರು ಬಹುಸಂಖ್ಯಾತರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು.
Kannada BSI Bible 2016
ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್‌ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಬಹು ಮಂದಿಯಾದದರಿಂದ ಮೋವಾಬ್ಯರು ಬಲು ದಿಗಿಲುಪಟ್ಟರು. ಅವರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾಗಿ ವಿುದ್ಯಾನ್ಯರ ಹಿರಿಯರಿಗೆ -
Kannada Bible (KNCL) BSI 2016
ಇಸ್ರಯೇಲರು ಬಹುಮಂದಿ ಇದ್ದುದರಿಂದ ಮೋವಾಬ್ಯರು ಬಹಳವಾಗಿ ದಿಗಿಲುಪಟ್ಟರು; ಇಸ್ರಯೇಲರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮೋವಾಬಿನವರು, ಇಸ್ರಾಯೇಲರು ಬಹಳ ಜನರಾಗಿರುವುದರಿಂದ ಅವರಿಗೆ ಬಹಳವಾಗಿ ಅಂಜಿದರು. ಮೋವಾಬಿನವರು ಇಸ್ರಾಯೇಲರಿಗೆ ದಿಗಿಲುಪಟ್ಟರು.