Numbers 22:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಕತ್ತೆಯು ಬಿಳಾಮನಿಗೆ, “ನೋಡು, ನಾನು ನಿನ್ನ ಸ್ವಂತ ಕತ್ತೆ. ಅನೇಕಾನೇಕ ವರ್ಷಗಳಿಂದ ನೀನು ನನ್ನ ಮೇಲೆ ಸವಾರಿ ಮಾಡುತ್ತಿರುವೆ. ನಾನು ಹಿಂದೆಂದೂ ಹೀಗೆ ಮಾಡಲಿಲ್ಲವೆಂದು ನಿನಗೆ ತಿಳಿದದೆ” ಎಂದು ಹೇಳಿತು. ಅದಕ್ಕೆ ಬಿಳಾಮನು, “ಅದು ನಿಜ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು.
Kannada BSI Bible 2016
ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆ ಕತ್ತೆ - ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ; ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ ಅಂದಾಗ ಬಿಳಾಮನು ಇಲ್ಲವೆಂದನು.
Kannada Bible (KNCL) BSI 2016
ಅದಕ್ಕೆ ಆ ಕತ್ತೆ, “ನಿನ್ನ ಜೀವಮಾನವೆಲ್ಲ, ಇಂದಿನ ತನಕ ಸವಾರಿ ಮಾಡುತ್ತಿದ್ದ ಕತ್ತೆ ನಾನಲ್ಲವೆ? ನಾನು ಎಂದಾದರೂ ಈ ರೀತಿ ಮಾಡಿದ್ದುಂಟೆ?” ಎಂದಿತು. ಆಗ ಬಿಳಾಮನು “ಇಲ್ಲ” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕತ್ತೆಯು ಬಿಳಾಮನಿಗೆ, “ಈ ದಿವಸದವರೆಗೂ ನೀನು ಯಾವಾಗಲೂ ಸವಾರಿಮಾಡುತ್ತಿದ್ದ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ರೀತಿ ಮಾಡಿದೆನೋ?” ಎಂದು ಪ್ರಶ್ನಿಸಿತು. ಅದಕ್ಕವನು, “ಇಲ್ಲ,” ಎಂದನು.