Numbers 22:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಕತ್ತೆ ನನ್ನನ್ನು ನೋಡಿ ಮೂರು ಸಲ ನನ್ನೆದುರಿನಿಂದ ಇನ್ನೊಂದು ಕಡೆಗೆ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದಲ್ಲಿ ನಾನು ಕತ್ತೆಯನ್ನು ಉಳಿಸಿ ನಿನ್ನನ್ನು ಆಗಲೇ ಕೊಂದುಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.
Kannada BSI Bible 2016
ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನೆದುರಿನಿಂದ ಒತ್ತಟ್ಟಿಗೆ ತಿರುಗಿಕೊಂಡಿತು; ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯನ್ನು ಉಳಿಸಿ ನಿನ್ನನ್ನು ಕೊಂದುಹಾಕಿಬಿಡುತ್ತಿದ್ದೆನು ಎಂದು ಹೇಳಿದನು.
Kannada Bible (KNCL) BSI 2016
ಈ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನೆದುರಿನಿಂದ ಪಕ್ಕಕ್ಕೆ ತಿರುಗಿಕೊಂಡಿತು. ಹಾಗೇ ತಿರುಗಿಕೊಳ್ಳದೆ ಹೋಗಿದ್ದರೆ ನಿನ್ನನ್ನು ಕೊಂದು ಕತ್ತೆಯನ್ನು ಉಳಿಸುತ್ತಿದ್ದೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕತ್ತೆ ನನ್ನನ್ನು ನೋಡಿ, ನನ್ನ ಮುಂದೆ ಈಗ ಮೂರು ಸಾರಿ ಓರೆಯಾಗಿ ಹೋಯಿತು. ಅದು ನನ್ನ ಮುಂದೆ ಓರೆಯಾಗಿ ಹೋಗದಿದ್ದರೆ, ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದುಹಾಕಿ ಕತ್ತೆಯನ್ನು ಉಳಿಸುತ್ತಿದ್ದೆನು,” ಎಂದನು.