Numbers 22:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನ ದೂತನು ಬಿಳಾಮನಿಗೆ, “ಆ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಆದ್ದರಿಂದ ಬಿಳಾಮನು ಬಾಲಾಕನ ನಾಯಕರೊಡನೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.
Kannada BSI Bible 2016
ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ದೂತನು ಅವನಿಗೆ - ಆ ಮನುಷ್ಯರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವದನ್ನೂ ಹೇಳಬಾರದು ಎಂದು ಹೇಳಲಾಗಿ ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟನು.
Kannada Bible (KNCL) BSI 2016
ಆಗ ಸರ್ವೇಶ್ವರನ ದೂತನು, “ಆ ವ್ಯಕ್ತಿಗಳ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವುದನ್ನೇ ಹೊರತು ಬೇರೆ ಏನನ್ನೂ ಹೇಳಬೇಡ,” ಎಂದು ತಿಳಿಸಿದನು. ಬಿಳಾಮನು ಬಾಲಾಕನ ಮುಂದಾಳುಗಳ ಜೊತೆ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.