Numbers 22:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಿಳಾಮನು ಬರುತ್ತಿರುವ ಸುದ್ದಿಯನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಸರಹದ್ದಿನಲ್ಲಿ ಅರ್ನೋನ್ ನದಿಯ ಬಳಿಯಲ್ಲಿರುವ ಮೋವ್ಯಾಬರ ಊರಿನಲ್ಲಿ ಅವನನ್ನು ಭೇಟಿಯಾಗಲು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.
Kannada BSI Bible 2016
ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವದಕ್ಕಾಗಿ ತನ್ನ ದೇಶದ ಮೇರೆಯಾದ ಅರ್ನೋನ್ ಹೊಳೆಯ ತೀರದಲ್ಲಿ ಇರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.
Kannada Bible (KNCL) BSI 2016
ಬಿಳಾಮನು ಬಂದ ಸಮಾಚಾರ ಬಾಲಾಕನಿಗೆ ಮುಟ್ಟಿತು. ಅವನು ಬಿಳಾಮನನ್ನು ಬರಮಾಡಿಕೊಳ್ಳಲು ತನ್ನ ನಾಡಗಡಿಯಾದ ಅರ್ನೋನ್ ಹೊಳೆಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೊರಟುಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು.