Numbers 22:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಿಳಾಮನು, “ನಾನು ಈಗ ಬಂದಿದ್ದೇನೆ. ಆದರೆ, ನಿನಗೆ ಇಷ್ಟವಾಗುವಂಥದ್ದನ್ನು ಹೇಳಲು ನನಗೆ ಸಾಧ್ಯವಿಲ್ಲ. ದೇವರು ನನಗೆ ತಿಳಿಸುವುದನ್ನೇ ನಾನು ಹೇಳಬೇಕು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.
Kannada BSI Bible 2016
ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಳಾಮನು - ಅದಿರಲಿ; ನಾನು ಬಂದಿದ್ದೇನೆ; ಆದರೆ ಏನು? ಏನಾದರೂ ಹೇಳುವದಕ್ಕೆ ನನಗೆ ಶಕ್ತಿಯುಂಟೋ? ದೇವರು ಆಡಿಸುವ ಮಾತನ್ನೇ ಹೇಳುತ್ತೇನಷ್ಟೆ ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ಬಿಳಾಮನು, “ಅದಿರಲಿ, ನಾನೀಗ ಬಂದಾಯಿತು, ಆದರೆ ನಾನಾಗಿ ಏನನ್ನು ಹೇಳುವ ಶಕ್ತಿ ನನಗಿಲ್ಲ, ದೇವರು ಆಡಿಸಿದ ಮಾತನ್ನೇ ಹೇಳಲು ಸಾಧ್ಯ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು.