Numbers 22:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್‌ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.
Kannada BSI Bible 2016
ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರಕೊಂಡು ಬಾಳೆಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲ್ಯರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.
Kannada Bible (KNCL) BSI 2016
ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು ‘ಬಾಳ್’ ಎಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಯೇಲರ ಶಿಬಿರದೊಂದು ಭಾಗವನ್ನು ತೋರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.