Numbers 22:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು, ಯಾಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. ನೀನು ಶಪಿಸಿದರೆ ಆಗ ನಾನು ಅವರನ್ನು ಸೋಲಿಸಿ ಈ ದೇಶದಿಂದ ಓಡಿಸಲು ನನಗೆ ಸಾಧ್ಯವಾಗುವುದು. ನೀನು ಯಾವನನ್ನು ಆಶೀರ್ವದಿಸುವಿಯೋ ಅವನು ಯಶಸ್ವಿಯಾಗುವನೆಂದೂ ನೀನು ಯಾವನನ್ನು ಶಪಿಸುವೆಯೋ ಅವನಿಗೆ ಸೋಲಾಗುವುದೆಂದೂ ನನಗೆ ಗೊತ್ತಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.
Kannada BSI Bible 2016
ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು; ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತು. ನಿನ್ನ ಆಶೀರ್ವಾದದಿಂದ ಶುಭವೂ ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬದನ್ನು ನಾನು ಬಲ್ಲೆ ಎಂದು ಹೇಳಿಸಿದನು.
Kannada Bible (KNCL) BSI 2016
ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.