Numbers 22:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಿಳಾಮನು, “ಈ ರಾತ್ರಿ ನೀವು ಇಲ್ಲೇ ಇಳಿದುಕೊಳ್ಳಿರಿ. ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ನಿಮಗೆ ತಿಳಿಸುವೆನು” ಎಂದು ಹೇಳಿದನು. ಆದ್ದರಿಂದ ಮೋವಾಬ್ಯರ ಹಿರಿಯರು ಆ ರಾತ್ರಿ ಬಿಳಾಮನ ಮನೆಯಲ್ಲಿ ಇಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.
Kannada BSI Bible 2016
ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ರಾತ್ರಿ ನೀವು ಇಲ್ಲೇ ಇಳಿದುಕೊಂಡಿರ್ರಿ; ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ತಿಳಿಸುವೆನು ಎಂದು ಹೇಳಲಾಗಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.
Kannada Bible (KNCL) BSI 2016
ಆಗ ಬಿಳಾಮನು, “ಈ ರಾತ್ರಿ ನೀವು ಇಲ್ಲೇ ತಂಗಿರಿ. ಸರ್ವೇಶ್ವರ ನನಗೆ ಕೊಡುವ ಉತ್ತರವನ್ನು ಬೆಳಿಗ್ಗೆ ತಿಳಿಸುವೆನು,” ಎಂದನು. ಅಂತೆಯೇ, ಮೋವಾಬ್ಯರ ಮುಖಂಡರು ಬಿಳಾಮನ ಬಳಿಯಲ್ಲಿ ಉಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.