Numbers 23:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.
Kannada BSI Bible 2016
ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬಿಳಾಮನು - ಇಲ್ಲಿ ನೀನು ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸಬೇಕೆಂದು ಬಾಲಾಕನಿಗೆ ಹೇಳಿದನು.
Kannada Bible (KNCL) BSI 2016
ಆಗ ಬಿಳಾಮನು, “ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದು ಬಾಲಾಕನಿಗೆ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.