Numbers 23:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು! ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.
Kannada BSI Bible 2016
ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತುಗಳನ್ನು ಕೇಳಿ ಬಾಲಾಕನು ಅವನಿಗೆ - ಇದೇನು ನೀನು ನನಗೆ ಮಾಡಿದ್ದು; ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟಿ ಎಂದು ಹೇಳಿದನು.
Kannada Bible (KNCL) BSI 2016
ಈ ನುಡಿಗಳನ್ನು ಕೇಳಿದ ಬಾಲಾಕನು ಅವನಿಗೆ, “ಇದೇನು ನೀವು ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಾನು ನಿಮ್ಮನ್ನು ಕರೆದೆ. ಶಪಿಸುವುದಕ್ಕೆ ಬದಲು ಅವರನ್ನು ಆಶೀರ್ವದಿಸಿಬಿಟ್ಟಿರಲ್ಲಾ?” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು.