Numbers 23:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
Kannada BSI Bible 2016
ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸಬೇಕು ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬೈಲು ಎಂಬ ಸ್ಥಳಕ್ಕೆ ಕರಕೊಂಡುಹೋಗಿ ಅಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
Kannada Bible (KNCL) BSI 2016
ಅಲ್ಲಿಂದ ನನ್ನ ಪರವಾಗಿ ಅವರನ್ನು ಶಪಿಸಬೇಕು” ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ‘ಚೋಫೀಮ್ ಬೈಲು’ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಅಲ್ಲಿಯೂ ಏಳು ಬಲಿಪೀಠಗಳನ್ನು ಕಟ್ಟಿಸಿ ಪ್ರತಿ ಒಂದು ಪೀಠದಲ್ಲಿ ಒಂದು ಹೋರಿ ಮತ್ತು ಟಗರನ್ನು ದಹನಬಲಿಯಾಗಿ ಸಮರ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.