Numbers 23:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಿಳಾಮನು ಬಾಲಾಕನ ಬಳಿಗೆ ಬಂದಾಗ ಅವನು ಇನ್ನೂ ಯಜ್ಞಪೀಠದ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು.
Kannada BSI Bible 2016
ಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ಪೀಠದ ಹತ್ತಿರ ನಿಂತಿದ್ದನು; ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು.
Kannada Bible (KNCL) BSI 2016
ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ದಹನಬಲಿಯನ್ನು ಸಮರ್ಪಿಸಿದ ಪೀಠದ ಹತ್ತಿರವೇ ನಿಂತಿದ್ದನು. ಮೋವಾಬ್ಯರ ಮುಖ್ಯಸ್ಥರು ಅವನ ಸಂಗಡವೇ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು. ಬಾಲಾಕನು ಅವನಿಗೆ, “ಯೆಹೋವ ದೇವರು ಏನು ಹೇಳಿದ್ದಾರೆ,” ಎಂದನು.